ಓ ಮನಸೇ, ನೀನೇಕೆ ಹೀಗೆ...?

ಹಲವು ಬಣ್ಣಗಳ ಹಲವು ಭಾವಗಳ ಹಲವು ರಾಗಗಳ ಹಲವು ನೋವುಗಳ ಮೂಲ ಈ ಮನಸು...

ಹೀಗೊಂದು ಪ್ರೀತಿಯ ಆತಿಥ್ಯ .....!! ನೆನಪುಗಳ ಬುತ್ತಿಯಿಂದ ...

ನನಗೆ ಆಗಷ್ಟೇ ಮೊದಲ ವರ್ಷದ ಡಿಗ್ರೀ ಯ ಕ್ಲಾಸ್ ಗಳು ಮುಗಿದು ರಜ ಶುರುವಾಗಿತ್ತು. ಚೆನ್ನೈ ನಲ್ಲಿರುವ ನಮ್ಮತ್ತೆಯಿಂದ ಫೋನ್ ಮೇಲೆ ಫೋನ್, ಈ ಸಲದ ರಜವನ್ನು ಚೆನ್ನೈ ನಲ್ಲಿ ಕಳೆಯಬಹುದು  ಬಾ ಎಂದು ಒಂದೇ ಸಮನೆ ಒತ್ತಾಯ. ಸರಿ ಎಂದು ನಾನು ಎರಡು ದೊಡ್ಡ ಬ್ಯಾಗ್ ಗಳ ಜೊತೆ ಚೆನ್ನೈ ತಲುಪಿಯಾಯ್ತು.  ಸೊಸೆಯಂದಿರು ಅಂದರೆ ನಮ್ಮತ್ತೆಗೆ ಪ್ರಾಣ.  ನಾನು ಹೋದ ಎರಡೇ ದಿನದಲ್ಲಿ ತಮ್ಮ ಸ್ನೇಹಿತ ಬಳಗಕ್ಕೆಲ್ಲ ' ತನ್ನ ಅಣ್ಣನ ಮಗಳು' ಎಂದು ಪರಿಚಯ ಮಾಡಿಕೊಟ್ಟಿದ್ದಾಯ್ತು. ನನಗೋ ಮಾತಿಗೆ ಮೊದಲು ನಗು , ಮಾತಿನ ನಂತರ ನಗು    ...ಸ್ವಲ್ಪ ನಗು ಜಾಸ್ತಿ. ಎಂದಿಗೂ ಹೀಗೆ ನಗುತ್ತಿರಮ್ಮ ಎಂಬ ಹಾರೈಕೆಯೂ ಹಿರಿಯರಿಂದ ಸಿಕ್ಕಿತು.ಚೆನ್ನೈ ನಲ್ಲಿರುವ ಕನ್ನಡ ಬಳಗ ಸಂಘದಲ್ಲಿ ನಮ್ಮತ್ತೆ ಹಾಗೂ ಮಾವ ಸಕ್ರಿಯ ಸದಸ್ಯರು, ನಾನು ಹೋದ ಸಮಯದಲ್ಲಿ ಮಾವ ಬಳಗದ ಸೆಕ್ರೆಟರಿ ಕೂಡ ಆಗಿದ್ದರು. ಹಾಗಾಗಿ, ಕನ್ನಡ ಬಳಗದ ಎಲ್ಲಾ ಚಟುವಟಿಕೆಗಳಲ್ಲಿ ಅತ್ತೆ ಮಾವರ ಜೊತೆ ನನಗೂ ಭಾಗವಹಿಸುವ ಅವಕಾಶ ಸಿಕ್ತು. ನಮ್ಮತ್ತೆಯ  ಸ್ನೇಹಿತರ  ಜೊತೆಗೆ ಕಳೆದ ಕೆಲ ಕ್ಷಣಗಳು, ಅವರ ಜೊತೆಗಿನ  ಒಡನಾಟ  ಕೆಲವೇ ದಿನಗಳದ್ದಾದರೂ  ಜೀವನಪೂರ್ತಿ ಮರೆಯಲಾರದಂಥ ಕೆಲವು ಅಪೂರ್ವ ಅನುಭವಗಳನ್ನಿತ್ತಿದೆ. ಅವರೆಲ್ಲರು ನನ್ನಲ್ಲಿ ತೋರಿದ ಆ ಪ್ರೀತಿ ಜೀವನಾನುಭವದ ಪುಟಗಳಲ್ಲಿ ಮಧುರತೆಯನ್ನು ತುಂಬಿದೆ.
ನನ್ನತ್ತೆ ಮನೆಯಿಂದ ಹತ್ತಿರವೇ ಇದ್ದ ಇನ್ನೊಬ್ಬ ಕನ್ನಡಿಗರು ಮೈಸೂರಿನ ನಿವೃತ್ತ ದಂಪತಿಗಳು. ನಮ್ಮತ್ತೆ ಅವರನ್ನು  ಅಂಕಲ್ ಆಂಟಿ  ಎಂದು ಕರೆಯುತ್ತಿದುದರಿಂದ ನನಗೂ ಅವರು ಅಂಕಲ್ ಆಂಟಿ ಆದರು.. ಅತ್ತೆ ಮನೆ ಹತ್ತಿರವೇ ಅವರ ಮನೆ ಇದ್ದುದರಿಂದ ದಿನಕ್ಕೊಮ್ಮೆ ಅವರ ಮನೆಗೆ ಹೋಗಿ ಬರುವುದು ಅಭ್ಯಾಸವಾಯ್ತು.ಅವರು ನಮಗೆ ತೋರುತ್ತಿದ್ದ ಪ್ರೀತಿ, ಆಪ್ಯಾಯಮಾನತೆಯನ್ನು ಇಲ್ಲಿ ಶಬ್ಧಗಳಿಂದ ವಿವರಿಸಲು ನನ್ನಿಂದ ಸಾಧ್ಯವಿಲ್ಲ. ಅವರು ನಮ್ಮನ್ನು ಒಂದಿನ ಊಟಕ್ಕೆ ಕರೆದಾಗ ನಾವು ಸಂತೋಷದಿಂದ ಒಪ್ಪಿಕೊಂಡು ಅವ್ರ ಮನೆಗೆ ಊಟಕ್ಕೆ ಹೋದೆವು.
ಸ್ಟಾರ್ಟರ್ ಗೆ ಟೊಮ್ಯಾಟೊ ಸೂಪ್ ಮಾಡಿದ್ರು. ತುಂಬಾ ರುಚಿಯಾಗಿತ್ತು. " ತುಂಬಾ ರುಚಿಯಾಗಿದೆ ಆಂಟೀ ..ನಂಗೆ ಇದರ recipe ಕೊಡಿ ನಾನೂ ಮನೆಗೆ ಹೋಗಿ ಟ್ರೈ ಮಾಡ್ತೀನಿ" ಅಂದೆ. ಆವ್ರು ಖುಷಿಯಾಗಿ ಮುದ್ದಾಮ್ ಹೇಳ್ಕೊಡ್ತೀನಮ್ಮ ಅಂತ ಹೇಳ್ತಾ ನಂಗೆ ಇನ್ನೊಂದಿಷ್ಟು ಸೂಪ್ ಬಡಿಸಿಬಿಟ್ರು. ಓಹ್ ! ಸರಿ ....ಚೆನ್ನಾಗಿತ್ತಲ್ಲಾ ...ಮುಗಿಸಿದೆ.
ಸೂಪ್ ನ ನಂತರ ಮೊಸರೊಡೆ ಬೌಲ್ ತಂದು ಮುಂದಿಟ್ಟರು. " ಇದೇನು ಆಂಟಿ ನಾನು ಇದುವರೆಗೂ ತಿಂದಿಲ್ಲ" ಅಂದೆ. "ಇದು ಮೊಸರೊಡೆ ...ಚೆನ್ನಾಗಿರುತ್ತೆ ತಿನ್ನಮ್ಮ" ಅಂದ್ರು.  ರುಚಿ ನೋಡಿ ಪರವಾಗಿಲ್ಲ ಚೆನ್ನಾಗಿದೆ ಎಂದು ಮೊಸರೊಡೆ ಮುಗಿಸಿದ್ದಾಯ್ತು.ಆಮೇಲೆ ಪೂರಿ ಸಾಗು... "ಅಯ್ಯೋ! ನಂಗೆ ಹೊಟ್ಟೆ ತುಂಬೊಯ್ತು ಆಂಟಿ ..ಒಂದೇ ಪೂರಿ ಸಾಕು" ಅಂದ್ರೂ ಕೆಳದೇ ಎರಡು ಪೂರಿ ಬಡಿಸಿದ್ರು. ಅದನ್ನೂ ತಿಂದಿದ್ದಾಯ್ತು.
ಅದು ತಿಂದಾದ ಮೇಲೆ ಪುಲಾವ್ ತಂದಾಗ ನಂಗೆ ಆಗ್ಲೇ ಹೊಟ್ಟೆ ತುಂಬಿದೆ. ಪುಲಾವ್ ಬೇಡ ಅಂದೆ. "ಅದಹೇಗಾಗತ್ತಮ್ಮ, ಅನ್ನಾನೇ ತಿನ್ನದೇ ಊಟ ಹೇಗೆ ಮುಗಿಸ್ತೀಯಾ ..ಸ್ವಲ್ಪ ತಿನ್ನು" ಅನ್ನುತ್ತಾ ಬಡಿಸಿದಾಗ ಬೇರೆ ವಿಧಿ ಇಲ್ದೇ ತಿಂದೆ.
ಅದಾದ ಮೇಲೆ ಜಾಮೂನ್ ಬೌಲ್  ತಂದು ಟೇಬಲ್ ಮೇಲಿಟ್ಟಾಗ  ನಾನು ಸುಸ್ತು ...!!
" ನಂಗೆ ಎದ್ದು ಓಡಿ ಹೋಗೋಣ ಅನಸ್ತಾ ಇದೆ ಆಂಟಿ " ಅಂದೆ ನಗುತ್ತಾ ..
"ನಿಂಗೆ ಎಷ್ಟು ಸೇರುತ್ತೋ ಅಷ್ಟೇ ತಿನ್ನಮ್ಮ ..ಆದ್ರೆ ಸ್ವಲ್ಪನೂ ತಿನ್ನದೇ ಮಾತ್ರ ಏಳಬೇಡ " ಅಂದ್ರು. 
ಅಯ್ಯೋ ..ಇನ್ನು ನನ್ನತ್ರ ಸಾಧ್ಯಾನೆ ಇಲ್ಲಾ ಆಂಟಿ " ಅಂದೆ.
ಹಾಗೆ ಹೇಳಬಾರದಮ್ಮ ...ನಿಂಗೋಸ್ಕರನೇ ಮಾಡಿದ್ದು ..ಸ್ವಲ್ಪ ತಿನ್ನು ಎನ್ನುತ್ತಾ ಬಡಿಸಿದಾಗ ನಂಗೆ ಅಳು ಬರುವುದೊಂದು ಬಾಕಿ.
ಆದ್ರೂ ಅವರು ಪ್ರೀತಿಯಿಂದ ನಮಗೋಸ್ಕರವೇ ಶ್ರಮ ಪಟ್ಟು ಮಾಡಿದ್ದಾರಲ್ಲ. ಅವ್ರ ಮನಸ್ಸು ನೋಯಿಸಲಾಗದು ನನ್ನಿಂದ...ಹೇಗೋ ಸ್ವಲ್ಪ ತಿಂದೆ.
ಅಲ್ಲಿಯವರೆಗೂ ನಗುತ್ತಾ ಮಾತಾಡ್ತಾ ಕೂತಿದ್ದ ಅಂಕಲ್ ಎದ್ದು ಬಂದು ಮಾರ್ಕೆಟ್ ನಿಂದ ತಂದ ಜಿಲೇಬಿ ಎದುರಿಟ್ಟಾಗ ...ನಾನು ನಿಜಕ್ಕೂ ಗಾಬರಿ ಬಿದ್ದೆ..!!  ಅಂಕಲ್ ..ನಾನು ಇನ್ನೂ ಏನಾದ್ರೂ ತಿಂದ್ರೆ ನಂಗೆ ನಡೆದು ಹೋಗೋಕ್ಕಾಗಲ್ಲ...ಯಾರಾದ್ರೂ ಹೊತ್ತು ಹೋಗಬೇಕಷ್ಟೆ..ಅಂದರೂ ಕಿವಿಗೆ ಹಾಕಿಕೊಳ್ಳದೆ ಒಂದು ಪೀಸ್ ಕೈಯಲ್ಲೇ ತಗೊ..ಟೇಸ್ಟ್ ಕೂಡ ನೋಡದೆ ಹಾಗೆ ಬಿಡಬೇಡ ಅಂದಾಗ ನನಗೆ ಕಣ್ಣಲ್ಲಿ ನೀರು ಬಂದಿತ್ತು ಅನಸತ್ತೆ.  
ಆ ಪ್ರೀತಿಯನ್ನು ಹೇಗೆ ನಿರಾಕರಿಸೋದು ? ಒಂದೇ ಒಂದು ಸ್ಮಾಲ್ ಪೀಸ್ ತಗೊಂಡು ತಿಂದು ಕೈ ತೊಳೆಯಲು ಸಿಂಕ್ ಗೆ ಹೋದಾಗ ............................. ತಿಂದಿದ್ದೆಲ್ಲಾ ಉಲ್ಟಾ ..... :P
ನಮ್ಮತ್ತೆ ನೋಡಿ ನಗ್ತಾ ನಿಂತಿದ್ರು.. ಅಂಕಲ್ , ಆಂಟಿ ನೂ ನೋಡಿಬಿಟ್ರೆ ಅಂತ ನಂಗೆ  ಭಯ . ಬೇಗ ಬೇಗ ಸಿಂಕ್ ಎಲ್ಲಾ ಕ್ಲೀನ್ ಆಗುವಂತೆ ನೀರು ಬಿಟ್ಟೆ. ( ನನಗೆ ಮೊಸರೊಡೆ ತಿಂದ್ರೆ ಆಗೋಲ್ಲ ..ಮತ್ತೊಮ್ಮೆ ಅದನ್ನು ತಿಂದು ಉಲ್ಟಾ  ಆದ್ಮೇಲೆ ಗೊತ್ತಾದದ್ದು !! )
ಅಂತೂ ಊಟ ತುಂಬಾ ಚೆನ್ನಾಗಿತ್ತು ಅಂತ ಹೊಗಳಿ recipe ಗಳನ್ನೆಲ್ಲ ಬರೆದುಕೊಂಡು ಮನೆಗೆ ಬಂದೆವು.
ಅಂಕಲ್ , ಆಂಟಿ ಯ ಪ್ರೀತಿ ಯಾವುದೋ ಜನ್ಮಾಂತರಗಳ ಋಣವಿರಬಹುದು ಅನ್ನಿಸಿತ್ತು. ಆಮೇಲೆ ನನ್ನ ಮದುವೆಯಾಗಿ ನಾವು ಮೈಸೂರ್ ನಲ್ಲಿ ಕಲ ದಿನಗಳಿದ್ದು ನಂತರ ಡೆಲ್ಲಿ ಗೆ ಟ್ರಾನ್ಸಫರ್ ಆಗಿ ಹೋಗುವಾಗ ನಮ್ಮನ್ನು ಬೀಳ್ಕೊಡಲೆಂದು 70 ರ ಹರೆಯದ ಅವರು ರೈಲ್ವೇಸ್ಟೇಷನ್ ಗೆ ಬಂದಾಗ ಅವರ ಕಾಲಿಗೆ ನಮಸ್ಕರಿಸಿ ಅತ್ತುಬಿಟ್ಟಿದ್ದೆ. (ಅವರು ಮುಂಚಿನ ದಿನವಷ್ಟೇ ರಜಕ್ಕೆಂದು ಮೈಸೂರ್ ಗೆ ಬಂದಿದ್ದರು. )
ಇಂಥ ಅನುಭವಗಳು ಜೀವನ ದ ಹಾಗೂ ಸಮಾಜದ ಬಗೆಗಿನ ನಮ್ಮ ನಿಲುವನ್ನೆ ಬದಲಾಯಿಸಿಬಿಡುತ್ತವೆ. ಜಗತ್ತು ಎಷ್ಟು ಸುಂದರ ಎಂಬ positive feeling ನ್ನು ನಮ್ಮಲ್ಲಿ ತುಂಬುತ್ತವೆ. ಎಲ್ಲರಿಗೂ  ನಿಸ್ವಾರ್ಥ ಪ್ರೀತಿ ಹಂಚುವ ಅಂಕಲ್ ಆಂಟಿ ಯ ರೀತಿಯ ಜನ ಈ ಕಾಲದಲ್ಲೂ ಇದ್ದಾರಲ್ಲ ಎನ್ನುವ ಯೋಚನೆ  ಹಿತವೆನಿಸುತ್ತದೆ.
ಅತ್ತೆ ಮನೆಯ ಪಕ್ಕದವರಾದ ಸರೋಜ ಆಂಟಿ, ಸುಗುಣ ಆಂಟಿ, ಅತ್ತೆಯಲ್ಲಿ ಯೋಗ ಕಲಿಯಲು ಬರುತ್ತಿದ್ದ ರತ್ನ, ಅವರೆಲ್ಲಾ ಕನ್ನಡದವರಲ್ಲದಿದ್ದರೂ ನಾವು ಗಂಟೆಗಟ್ಟಳೆ ಮಾತಾಡುತ್ತಿದ್ದುದು, ಅವರು ತಮಿಳ್ ನಲ್ಲಿ ಕೇಳಿದ ಪ್ರಶ್ನೆಗಳಿಗೆ ನಾನು ಕನ್ನಡದಲ್ಲಿ ಉತ್ತರಿಸುತ್ತಿದ್ದುದು, ಅವೆಲ್ಲಾ ಮರೆಯಲಾರದ ಕ್ಷಣಗಳು ಹಾಗೂ ಮರೆಯಬಾರದ ಬಂಧಗಳು. 
ಚೆನ್ನೈ ನಲ್ಲಿ ನನ್ನ ಆತ್ಮೀಯ ಬಳಗವನ್ನು ಮತ್ತೊಮ್ಮೆ ಭೇಟಿಮಾಡುವ ಅವಕಾಶಕ್ಕಾಗಿ ಕಾಯುತ್ತಿದ್ದೇನೆ. ಅವರನ್ನೆಲ್ಲ ಭೇಟಿಯಾಗಿ ಹತ್ತು ವರ್ಷಗಳು ಕಳೆದಿದ್ದರೂ ಇಂದಿಗೂ ನನ್ನ ಕ್ಷೇಮ ವಿಚಾರಿಸುವ ಅವರ ಆತ್ಮೀಯತೆಗೆ ಕರಗಿಹೋಗಿದ್ದೇನೆ. ಚೆನ್ನೈ ಗೆ ಹೋಗಿ ಬಂದು 5 ವರ್ಷಗಳ ನಂತರ ನಡೆದ ನನ್ನ ಮದುವೆಗೆ ಅವರೆಲ್ಲಾ ಕಳುಹಿಸಿದ ರಾಶಿ ಉಡುಗೊರೆಗಳು ಅವರೆಲ್ಲರ ನೆನಪುಗಳನ್ನು ಹೊತ್ತಿರುವ ನನ್ನ ಪಾಲಿನ  ಅಮೂಲ್ಯ ಆಸ್ತಿಗಳು.
ನನ್ನ ಸ್ವಂತ ಅತ್ತೆಯನ್ನು ಭೇಟಿ ಮಾಡಿಯೇ 4 ವರ್ಷಗಳಾಯಿತು. ನಮ್ಮನ್ನೆಲ್ಲಾ ತುಂಬಾ ಪ್ರೀತಿಸುವ, ತುಂಬಾ ಹಚ್ಚಿಕೊಂಡಿರುವ ನಮ್ಮತ್ತೆ ಫೋನ್  ಮಾಡಿದಾಗಲೆಲ್ಲ ಎಮೋಷನಲ್ ಆಗಿಬಿಡುತ್ತಾರೆ.
ಜೀವನಚಕ್ರ ಉರುಳುತ್ತಿದ್ದಂತೆ , ದಾರಿಗಳು ಕವಲಾಗುತ್ತಿದ್ದಂತೆ ಭೌತಿಕವಾಗಿ ನಾವು ನಮ್ಮವರಿಂದ ಎಷ್ಟು ದೂರ ಸಾಗಬೇಕಾಗುತ್ತದಲ್ಲ. ಆದರೂ ಮನದಲ್ಲಿರುವ ಪ್ರೀತಿ ನಿಜವಾದದ್ದಾದಲ್ಲಿ ಒಬ್ಬರಿಗೊಬ್ಬರು,ಒಬ್ಬರೊಲ್ಲೊಬ್ಬರು ಸದಾ ಇದ್ದೇ ಇರುತ್ತೇವೆ.
ಈ ಸಲವಾದರೂ ಕನಿಷ್ಠ 15 ದಿನಗಳ ಮಟ್ಟಿಗೆ ಚೆನ್ನೈ ಪ್ರವಾಸದ ಮಹದಾಸೆ ಇದೆ. ಆ ಆಸೆ ಈಡೇರಲಿ ಎಂದು ಪ್ರಾರ್ಥಿಸುತ್ತಿದ್ದೇನೆ.

16 comments:

Ittigecement May 28, 2010 at 4:29 PM  

ಓ ಮನಸೆ...

ನನಗೂ ಮುಂಬೈನಲ್ಲಿ ಇಂಥಹ (ಮಲೆಯಾಳಿ ಕುಟುಂಬ) ಬಂಧುಗಳ ಅನುಭವ ಇನ್ನೂ ಹಸಿರಾಗಿದೆ..

ನಿಜಕ್ಕೂ ನೋಡಿದರೆ..
ಅವರು.. ಯಾರೊ ?
ನಾವು ಯಾರೊ ?
ಅವರ ಮುಗ್ಧ ಸ್ನೇಹ, ಪ್ರೀತಿ..
ಆದರ,, ಆತಿಥ್ಯ ಮರೆಯಲು ಸಾಧ್ಯವೇ ಆಗುವದಿಲ್ಲ.. ಅಲ್ಲವಾ ?

ಒಳ್ಳೆಯ ಲೇಖನ..
ನನ್ನ ನೆನಪುಗಳನ್ನೊಮ್ಮೆ ಹಸಿರಾಗಿಸಿದ್ದಕ್ಕೆ ಧನ್ಯವಾದಗಳು...

ಅಶ್ಟೆಲ್ಲ ತಿಂದಿದ್ದೀರಲ್ಲ... ಏನೂ ಆಗಲಿಲ್ಲವಾ ?
ಹ್ಹಾ..ಹ್ಹಾ.. !

Ranjita May 28, 2010 at 8:43 PM  

ಹ್ಹೀ ಹ್ಹೀ ಹ್ಹೀ ಹ್ಹೀ ಹೊಟ್ಟೆ ತುಂಬಿದ ಮೇಲೂ ತಟ್ಟೆ ಮುಂದೆ ಕೂತಿದ್ರೆ ಅವರಾದ್ರೂ ಏನ್ ಮಾಡ್ತಾರೆ ಪಾಪ .. :P ಒತ್ತಾಯ ಮಾಡಿ ಬಡಿಸೋದಕ್ಕೆ ಬರ್ತಾರೆ .. ಹ್ಹೀ ಹ್ಹೀ ಹ್ಹೀ ಹ್ಹೀ

ಸೀತಾರಾಮ. ಕೆ. / SITARAM.K May 28, 2010 at 9:08 PM  

nice sharing!

ಮನದಾಳದಿಂದ............ May 29, 2010 at 2:12 AM  

ಈ ಬಂಧನವೇ ಹೀಗೆ.........
ಸಂಬಂಧವಿಲ್ಲದೆ ಹುಟ್ಟಿ.........
ಮರೆಯದ ಬಂಧುಗಳಾಗಿ.......
ಹೊಂದಿಕೊಳ್ಳುತ್ತೇವೆ..........
ನಮಗ್ಯಾರಿಗೂ ಅರಿಯಲಾಗದ ಪ್ರೀತಿಯ ಬಂಧನವಿದು.
ಚನ್ನಾಗಿ ತಿಂದಿದ್ದಲ್ಲದೆ ಉಲ್ಟಾ ಬೇರೆ ಮಾಡಿದ್ರಾ!
ನಿಮ್ಮ ನೆನಪಿನ ಬುತ್ತಿ ಹಂಚಿಕೊಂಡಿದ್ದಕ್ಕೆ ಧನ್ಯವಾದಗಳು.

Raghu May 29, 2010 at 5:10 AM  

ಕೆಲವು ನೆನಪುಗಳು ತುಂಬಾ ಮಧುರ.. ಅವುಗಳನ್ನು ನೆನೆಯೋದರಿಂದ ನಮಗೆ ಸಂತೋಷ, ಏನೋ ಖುಷಿ ಸಿಗುತ್ತೆ ಅಲ್ವ..?
ನಿಮ್ಮವ,
ರಾಘು.

ಹೆಸರು ರಾಜೇಶ್, May 31, 2010 at 5:18 AM  

ಮನಮುಟ್ಟುವ ವಿವರಣೆ.....ದೂರದ ಊರಿನಲ್ಲಿದ್ದರೂ ನಿಮಗೆ ನಿಮ್ಮವರದೇ ಕನವರಿಕೆ. ನಿಜಕ್ಕು ಖುಷಿಯಾಗುತ್ತದೆ. ನಿಮ್ಮ ಲೇಖನದಲ್ಲಿ ನೀವು ಮತ್ತೆ ನಿಮ್ಮವರೋದಿಗೆ ಸಂವಾದ ನಡೆಸಿದ್ದೂ ನೀವು ದೂರದೂರಿನಲ್ಲಿದ್ದರೂ ನಿಮ್ಮ ಮನಸ್ಸೂ ಮಾತ್ರ ಕರುನಾಡಲ್ಲಿದೇ ಎಂದು ತಿಳಿಯುತ್ತದೆ......:):)

ಸಾಗರದಾಚೆಯ ಇಂಚರ May 31, 2010 at 7:51 AM  

ನೆನಪುಗಳು ಯಾವಾಗಲೂ ಮಧುರ
ಸುಂದರ ಬರಹ

ಓ ಮನಸೇ, ನೀನೇಕೆ ಹೀಗೆ...? June 4, 2010 at 7:34 AM  

ಪ್ರಕಾಶಣ್ಣ, ರಂಜಿತಾ, ಸೀತಾರಾಮ್ ಸರ್, ಪ್ರವೀಣ್ , ರಾಘು , ರಾಜೇಶ್, ಸಾಗರದಾಚೆಯ ಇಂಚರ ..ನಿಮ್ಮೆಲ್ಲರ ಪ್ರತಿಕ್ರಿಯೆಗಳಿಗೆ ತುಂಬಾ ಧನ್ಯವಾದಗಳು.

ಜಲನಯನ June 4, 2010 at 8:15 AM  

ಓ ಮನಸು ಎಂಥಾ ಮನಸು...?!! .
ಪ್ರೀತಿಗೆ ಸೋಲುವುದಲ್ಲಾ ಮನಸು....
ಮನಸ ಕಾಡುವುದಲ್ಲ ಮನಸು...
ಆದರೆ,,..but...
ಒತ್ತಾಯಕ್ಕೆ ಮಣಿದು ಅಷ್ಟೊಂದು ತಿನ್ನೋದು ಧೈರ್ಯನೇ ಸರಿ....ಹಹಹಹ...

ಮನಸಿನಮನೆಯವನು June 30, 2010 at 12:22 AM  

ಓ ಮನಸೇ, ನೀನೇಕೆ ಹೀಗೆ...? ,

ಮಧುರ ಮಧುರವೀ ನೆನಪಿನಸಾಲು..
ಮುಂದಿನ ದಾರಿಗೆ ಶುಭ ಹಾರೈಕೆ..

ಚಂದ್ರು July 23, 2010 at 11:21 AM  

Nija neevu heliddu. E jagathu sundara. Naavu hege nodthiviyo hage kaanuthe. Nimma railways station nalli neevu bavakaraduddu chennagide.

Shalini Rao August 11, 2010 at 1:44 AM  

chetu....ninna chennai pravaasa da nenapina lekhana kushi kodtu.

avella tumba madhura nenapugalu.

- Chennai atte.

ಚಿನ್ಮಯ ಭಟ್ October 6, 2010 at 10:38 PM  

ಗೊತ್ತಿಲ್ಲದೇ ಬಂದು ಗೊತ್ತಾಗದಷ್ಟು ಒಳಹೊಕ್ಕಿ
ಬಿಡುವಾಗ ಗೊತ್ತಾಗುವದು ಕೆಲವೊಂದು ಸಂಬಂಧ
ಎಷ್ಟು ಅನನ್ಯ ಎಂದು
ಬೇಜಾರಾಗುವುದು ಅವರ ನೆನೆದಾಗ,
ಅನಿಸುವುದು ,ಇರಲಿ ಅವರು ನಮ್ಮೊಡನೆ ಎಂದೂ ಎಂದು

ಓ ಮನಸೇ, ನೀನೇಕೆ ಹೀಗೆ...? October 8, 2010 at 2:55 AM  

ಆಕಸ್ಮಿಕವಾಗಿ ಬೆಸೆದುಕೊಂಡು ಬಿಡುವ ಬಂಧಗಳ ಬಗ್ಗೆ ತುಂಬಾ ಚೆಂದದ ಸಾಲುಗಳಲ್ಲಿ ಹೇಳಿದ್ದೀರಾ ಚಿನ್ಮಯ್ ಅವ್ರೆ . ನಿಜ ಅಲ್ವಾ .. ಎಲ್ಲೋ ಭೇಟಿಯಾಗಿ , ಸ್ನೇಹ ಬೆಳೆದು , ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಬಿಡುವ ಈ ರೀತಿಯ ಸಂಭಂಧಗಳು ನಿಜವಾಗಲೂ ನಮ್ಮ ಲೈಫ್ ಗೆ ಸಿಕ್ಕ ಬೋನಸ್ ಗಳಂತೆ ...:)
ನಿಮ್ಮ ಈ ಸುಂದರ ಸಾಲುಗಳಿಗೆ ತುಂಬಾ ಧನ್ಯವಾದಗಳು.

ushodaya July 15, 2012 at 3:55 AM  

thumbaa olle lekhana.

C N Ramesh November 2, 2012 at 6:21 AM  

An excellent write-up Chethana. Please keep writing and do visit Chennai.

www.rameshcn.blogspot.com

Post a Comment

ಬನ್ನಿ ಭಾವಗಳ ತವರಿಗೆ

ಬನ್ನಿ ಶುದ್ಧ ಭಾವಗಳೆ, ಶುಭ್ರ ಭಾವಗಳೆ ..
ದೂರ ಸರಿಯಿರಿ ದುಷ್ಟ ಭಾವಗಳೆ, ಭ್ರಷ್ಟ ಭಾವಗಳೆ...

Followers

WHO'S AMONG US

stat counter
elogicwebsolutions.com